ಬೆಂಗಳೂರು : ರಾಜ್ಯದಲ್ಲಿ ಮುಂದಿನ 5-6 ದಿನಗಳ ವರೆಗೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖವಾಗಿ ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೆಂಗಳೂರಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು,
ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಮಂಗಳೂರು ಉಡುಪಿ ಭಾಗದಲ್ಲಿ ಅ.1ರಿಂದ 3ರವರೆಗೆ ಯೆಲ್ಲೋ ಅಲರ್ಟ್ ಇರಲಿದೆ.

