ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ಭಾರೀ ಮಳೆ  ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

ಸೆಪ್ಟೆಂಬರ್ 28 ಹಾಗೂ 29ಕ್ಕೆ ಬೀದರ್‌, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಸೆಪ್ಟೆಂಬರ್ ಅಂತ್ಯದವರೆಗೂ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ 14 ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್​ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ಎಚ್ಚರಿಕೆ ನೀಡಲಾಗಿದೆ.