ಬೆಂಗಳೂರು : 7ನೇ ವೇತನ ಆಯೋಗ ಜಾರಿ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಕೊನೆಗೂ ಇಡೇರಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ತೀರ್ಮಾನ ಕೈಗೊಂಡಿದ್ದು, ಸರ್ಕಾರಿ ನೌಕರರಲ್ಲಿ ಸಂತಸ ಮೂಡಿದೆ.7ನೇ ವೇತನ ಆಯೋಗದ ಶಿಫಾರಸುಗಳು ಆಗಸ್ಟ್ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ.
ಆಯೋಗ ಸರ್ಕಾರಿ ನೌಕರರ ವೇತನವನ್ನು ಶೇ 27.5ರಷ್ಟು ಹೆಚ್ಚಳ ಮಾಡುವಂತೆ 244 ಪುಟಗಳ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಆಯೋಗದ ಶಿಫಾರಸ್ಸಿನಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ 2023ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಶೇ17ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದರು.
ಬಾಕಿ ಉಳಿದಿರುವ ಶೇ10.5 ರಷ್ಟು ವೇತನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದಾರೆ. ಇದು ಆಗಸ್ಟ್ 1ರಿಂದ ಜಾರಿಯಾಗಲಿದೆ. ಈ ಮೂಲಕ ಶೇ 17 ಮತ್ತು ಶೇ 10.5 ರಷ್ಟು ಸೇರಿ ಒಟ್ಟು ಶೇ 27ರಷ್ಟು ವೇತನ ಹೆಚ್ಚಿಸಲಾಗುತ್ತದೆ. ಇದರಿಂದ ಆರಂಭಿಕ ನೌಕರರ ಕನಿಷ್ಠ ವೇತನ 17 ಸಾವಿರದಿಂದ 27 ಸಾವಿರಕ್ಕೆ ಏರಿಕೆಯಾಗಿದೆ.

