ಬೆಂಗಳೂರು: ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್‌ಪೆಕ್ಟರ್ ಚಂದ್ರಾಧರ ಅವರನ್ನು ಬಂಧಿಸಲಾಗಿದೆ. ಈ ಸಂಬಂಧ ಈಗಾಗಲೇ ಕೆಲಸದಿಂದ ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ಚಂದ್ರಾಧರ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಧಿಸಿದೆ. . ಬಂಧಿತ ಇನ್ಸ್‌ಪೆಕ್ಟರ್ ಚಂದ್ರಾಧರ ಈ ಹಿಂದೆ ಯಲಹಂಕದ ಪೊಲೀಸ್ ತರಬೇತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಬಿಟ್ ಕಾಯಿನ್ ಹಗರಣದಲ್ಲಿ ಇವರು ಹೆಸರು ಕೇಳಿಬಂದ ಹಿನ್ನೆಲೆಯಲ್ಲಿ ಸೇವೆಯಿಂದ ಆಮಾನತುಗೊಂಡಿದ್ದರು. ಪ್ರಕರಣದಲ್ಲಿ ಚಂದ್ರಾಧರ ಪಾತ್ರ ಇರುವ ಬಗ್ಗೆ ಸಾಕ್ಷ್ಯ, ಸಂಗ್ರಹಿಸಿದ್ದ ಎಸ್‌ಐಟಿ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆಯ ಅಗತ್ಯದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಐದು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

