ಬೆಂಗಳೂರು: ಅಮೆರಿಕದಲ್ಲಿ ಚುನಾವಣೆ ರಂಗೇರಿದ್ದು ಅಭ್ಯರ್ಥಿಗಳು ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಈ ಬಾರಿ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕ ಅಧ್ಯಕ್ಷ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧ್ಯಕ್ಷರಾಗುವ ಕನಸು ಕಾಣುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದಿಂದ ಆಹ್ವಾನ ಬಂದಿದೆ.
ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್ ಹತ್ತಲಿದ್ದಾರೆ. ಬಳಿಕ ಡಿ.ಕೆ ಶಿವಕುಮಾರ್ ಫ್ಯಾಮಿಲಿ ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

