ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಕೋಟ್ಯಂತರ ರೂಪಾಯಿ ತೆಲಂಗಾಣ ಕಂಪನಿಗಳಿಗೆ ವರ್ಗಾವಣೆಯಾಗಿದೆ ಎಂಬ ಆರೋಪಗಳು ಕೇಳಿಬಂದಿರುವುದರಿಂದ ಹಣ ವಾಪಸ್ ನೀಡುವಂತೆ ನೆರೆ ರಾಜ್ಯದ ಸಿಎಂಗೆ ಕನ್ನಡಿಗರು ಪತ್ರ ಬರೆದಿರುವುದು ಕಂಡುಬಂದಿದೆ. ಕರ್ನಾಟಕದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಸಲಾಗಿದೆ. ಹೀಗಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ಹಿಂತಿರುಗಿಸಬೇಕು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಮನವಿ ಮಾಡಲಾಗಿದೆ.
ತೆಲಂಗಾಣ ಸಿಎಂಗೆ ಕನ್ನಡಿಗರ ಹೆಸರಿನಲ್ಲಿ ಪತ್ರ ಬರೆದಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಹಂಚಿಕೊಂಡಿದೆ.
ನಿಮ್ಮಲ್ಲಿ ಕನ್ನಡಿಗರು ಕೇಳಿಕೊಳ್ಳುವುದೇನೆಂದರೆ ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂತಿರುಗಿಸಿ ಕೊಡಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು ಈ ನೀಚ ಸರ್ಕಾರ ಉಂಡು ಹೋದ ಕೊಂಡು ಹೋದ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನೂ ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಖರ್ಚಿಗೆ ಸಾಗಿಸಿದ್ದಾರೆ.

