ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು (ಜು.22) ಸಾಂಕೇತಿಕವಾಗಿ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್​ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.

ಸರ್ಕಾರಕ್ಕೆ ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ-ಯುಕೆಜಿ ತರಗತಿ ಆರಂಭಿಸುವುದಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಗೆ ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಇದೀಗ ಕೊನೆಗೂ ಸರ್ಕಾರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್​ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ.