ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್‌ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ಬೆಲೆ (ರೇಟ್) ಕೇಳಿ ಕಿರುಕುಳ ನೀಡಿದ್ದ ಆರೋಪಿಯನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ರಾಮಮೂರ್ತಿನಗರದ ಎನ್‌ಆರ್‌ಐ ಲೇಔಟ್ ನಿವಾಸಿ, ಹಣ್ಣಿನ ವ್ಯಾಪಾರಿ ವಿಜಯ್ ರಾಘವ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ನೀಡಿದ ದೂರಿನನ್ವಯ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಸದ್ಯ ಘಟನೆಯ ವಿಡಿಯೋ ಆಧಾರದ ಮೇಲೆ ಆರೋಪಿಯನ್ನು ಸರೆಹಿಡಿದಿರುವ ಪೊಲೀಸರು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಬೈಕ್ ಸೀಜ್ ಮಾಡಿದ್ದಾರೆ‌.