ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಭಾನುವಾರದಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು, ಭಾನುವಾರದಂದು (ಫೆ.15) ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.