ಬೆಂಗಳೂರು: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 26ರಂದು ಬೆಂಗಳೂರು ನಗರದಾದ್ಯಂತ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆದೇಶ ಹೊರಡಿಸಿದೆ.
ಈ ಸಂಬಂಧ ಆದೇಶ ಹೊರಡಿಸಿರುವ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು, ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ತಿಳಿಸಿದೆ. ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಲಾಗಿದೆ.

