ಬೆಂಗಳೂರು: ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಮಂಗಳವಾರ ಮಧ್ಯಾಹ್ನ (ಅಕ್ಟೋಬರ್ 20) ನಿಗೂಢ ಸ್ಫೋಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಇಬ್ಬರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಸಿಕ್ಕಿದ ಸ್ಫೋಟಕ ಸಾಮಾಗ್ರಿಗಳ ಮಾದರಿಯನ್ನು ಸಂಗ್ರಹಿಸಿರುವ ಪೊಲೀಸರು, ಎಫ್‌ ಎಸ್ ಎಲ್ ಗೆ ರವಾನಿಸಿದ್ದಾರೆ‌.

ಸದ್ಯ ಪ್ರಕರಣವು ತನಿಖಾ ಹಂತದಲ್ಲಿದೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಸ್ಫೋಟಕ್ಕೆ ನಿಖರ ಕಾರಣ ಏನು ಎಂಬುದು ಗೊತ್ತಾಗಲಿದೆ. ಸಾರ್ವಜನಿಕರು ಯಾವುದೇ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮನವಿ ಮಾಡಿದ್ದಾರೆ.