ಬೆಂಗಳೂರು: ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಯಲಹಂಕದಲ್ಲಿ ನ್ಯಾಯಾಧೀಶರ ಮನೆಯಲ್ಲಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಮುಂಜಾನೆ ಹಾಜರು ಪಡಿಸಿದ್ದರು.
ನಾಗೇಂದ್ರರನ್ನು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಯಿತು. 5 ದಿನಗಳ ಕಾಲ ಕಸ್ಟಡಿಗೆ ನೀಡಿದ ನ್ಯಾಯಾಧೀಶರು, 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿ ಆದೇಶಿಸಿದರು

