ಬೆಂಗಳೂರು: ನಗರದ ʼ220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯʼ ವಿದ್ಯುತ್‌ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಆ.25 ರಂದು ಭಾನುವಾರ ಬೆಳಗ್ಗೆ 9.30 ಗಂಟೆಯಿಂದ ಮಧ್ಯಾಹ್ನ 3.30 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಬೆಂಗಳೂರು ಉತ್ತರ ವೃತ್ತದ ಅಧೀಕ್ಷಕ ಎಂಜಿನಿಯರ್‌ ತಿಳಿಸಿದ್ದಾರೆ.

ನಗರದ ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿ ನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡಾವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4ನೇ ಮುಖ್ಯ, 8ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶಗಳು.