ಬೆಂಗಳೂರು: ಇಡೀ ದೇಶದಲ್ಲಿ ಎನ್‌ಡಿಎ ಗೆಲುವಿನ ಕಡೆ ದಾಪುಗಾಲು ಹಾಕುತ್ತಿದೆ. ಲೋಕಸಭೆ ಚುನಾವಣೆಯಲ್ಲಿ 350 ಸ್ಥಾನಗಳನ್ನ ದಾಟಲಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿಕೆ ನೀಡಿದರು.

ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಡಬಲ್ ಡಿಜಿಟ್ವ ದಾಟುತ್ತೆ ಅಂತಾ ಹೇಳಿತ್ತು ಆದರೆ ದಾಟಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಬಹುತೇಕ ಸೋಲನ್ನು ಒಪ್ಪಿಕೊಂಡಿದೆ. ಕಾಂಗ್ರೆಸ್ ನೀಡಿದ ಗ್ಯಾರಂಟಿಗೆ ವಾರಂಟಿ ಇಲ್ಲವೆಂದು ಋಜುವಾತಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.