ಬೆಂಗಳೂರು: ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 21 ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಬೆಸ್ಕಾಂ ಹಾಗೂ ಕೆಪಿಟಿಸಿಎಲ್ ಪ್ರಕಟಿಸಿರುವ ಮಾಹಿತಿಯಂತೆ, ಗಂಗಾನಗರ, ವೀವರ್ಸ್ ಕಾಲೋನಿ, ಸಿಬಿಐ ಕ್ವಾರ್ಟಸ್, RBI ಕಾಲೋನಿ, ಸಿಪಿಯು ಬ್ಲಾಕ್, ಯುಎಎಸ್ ಕ್ಯಾಂಪಸ್, ದಿನ್ನೂರು ಮುಖ್ಯ ರಸ್ತೆ, ಆ‌ರ್.ಟಿ.ನಗರ, ಎಚ್‌ಎಂಟಿ ಬ್ಲಾಕ್, ಚಾಮುಂಡಿನಗರ, ಆರ್ಮಿ ವೆಟರನ್ಸ್ ಕಾಲೋನಿ, ಆ‌ರ್.ಟಿ.ನಗರ ಪೊಲೀಸ್ ಠಾಣೆ,

ಡಾಲರ್ಸ್ ಕಾಲೋನಿ, ಎಂಎಲ್‌ಎ ಲೇಔಟ್, ರತನ್ ಅಪಾರ್ಟ್‌ಮೆಂಟ್, ಗಾಯತ್ರಿ ಅಪಾರ್ಟ್‌ಮೆಂಟ್, ಕೃಷ್ಣಪ್ಪ ಬ್ಲಾಕ್, ಗುಡ್ಡದಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್‌ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.