ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ನಟ ದರ್ಶನ್ ಸೇರಿ ಒಟ್ಟು 17 ಆರೋಪಿಗಳನ್ನು 24 ಎಸಿಎಂಎಂ ಇನ್ಚಾರ್ಜ್ ಕೋರ್ಟ್ ಎಕಾನಾಮಿಕ್ ಆಫೇನ್ಸ್ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು.
ಇದೀಗ ಈ ಕೊಲೆ ಕೇಸ್ ಸಂಬಂಧ ಎ1 ಪವಿತ್ರಾ ಗೌಡ ಜೈಲು ಪಾಲಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಇಂದು ಮಧ್ಯಾಹ್ನ 3:50 ಗಂಟೆ ಸುಮಾರಿಗೆ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರು ಪಡಿಸಿದರು. ಇದೇ ವೇಳೆ ನ್ಯಾಯಾಧೀಶರು ಆರು ಜನ ಹೊರತು ಪಡಿಸಿ ಉಳಿದ ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ. ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಕೋರ್ಟ್ ಮೂರನೇ ಬಾರಿಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
A 1 ಪವಿತ್ರಗೌಡ, A 3 ಪವನ್, A 4 ರಾಘವೇಂದ್ರ, A 5 ನಂದೀಶ, A 6 ಜಗದೀಶ್, A 7 ಅನುಕುಮಾರ್ A 8 ರವಿ ಶಂಕರ್ ಇವರಿಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

