ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಗರ್ಭಿಣಿ ಸಾವನ್ನಪ್ಪಿದ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಬೂದಿಗೆರೆ ವಿರಗನಗರ ನಿವಾಸಿ ಮಾನಸ ಮೃತಪಟ್ಟಿದ್ದಾರೆ. ಪರೀಕ್ಷೆ ಬರೆಯಲು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಲಾರಿ ಹರಿದು ಸಾವನ್ನಪ್ಪಿದ್ದಾರೆ.
ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಮಾನಸ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿಮೆಂಟ್ ಮಿಕ್ಸರ್ ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

