ಬೆಂಗಳೂರು: ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಣ್ಣೂರು-ಬಾಗಲೂರು ಮುಖ್ಯರಸ್ತೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು 15 ವರ್ಷದ ವರುಣ್ ಎಂದು ಗುರುತಿಸಲಾಗಿದೆ. ಈತ ಇತ್ತೀಚೆಗಷ್ಟೇ 9ನೇ ತರಗತಿ ಉತ್ತೀರ್ಣನಾಗಿದ್ದನು. ವರುಣ್ ಮನೆಯಿಂದ ಹತ್ತಿರದ ಅಂಗಡಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಅತೀ ವೇಗವಾಗಿ ಬಂದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಹೆಣ್ಣೂರು ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಪಘಾತಕ್ಕೆ ಕಾರಣವಾದ ಖಾಸಗಿ ಬಸ್ ಮತ್ತು ಅದರ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

