ಬೆಂಗಳೂರು: ಮಡಿವಾಳ ಚೆಕ್ಪೋಸ್ಟ್ ಬಳಿಯ ಪಾದಚಾರಿ ಮಾರ್ಗದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ 6 ಮಂದಿ ವಿದೇಶಿ ಮಹಿಳೆಯರನ್ನು ಸಿಸಿಬಿ ಮಹಿಳಾ ರಕ್ಷಣಾ ದಳ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನೈಜೀರಿಯಾ ಮತ್ತು ಉಗಾಂಡ ದೇಶದ ವಿದೇಶಿ ಮಹಿಳೆಯರು ವೀಸಾ ಅವಧಿ ಮುಕ್ತಾಯಗೊಂಡಿ ದ್ದರೂ ನಗರದಲ್ಲಿ ಅಕ್ರಮವಾಗಿ ವಾಸವಾಗಿದ್ದರು.
ಮಡಿವಾಳ ಬಸ್ ನಿಲ್ದಾಣದ ಪಾದಚಾರಿ ಮಾರ್ಗದ ಬಳಿ ನಿಂತುಕೊಂಡು ರಸ್ತೆಯಲ್ಲಿ ಓಡಾಡುವ ಪುರುಷರನ್ನು ವೇಶ್ಯವಾಟಿಕೆಗೆ ಪ್ರಚೋದಿಸುತ್ತಿದ್ದರು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಿಂದ ಸಿಸಿಬಿ ಮತ್ತು ಕೋರಮಂಗಲ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಅವರ ಪಾಸ್ಪೋರ್ಟ್ ಮತ್ತು ವೀಸಾ ಪರೀಶಿಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

