ಬೆಂಗಳೂರು: ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೆನಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ ಅವರು ಸಭಾತ್ಯಾಗ ಮಾಡಿದ ಅಚ್ಚರಿಯ ಪ್ರಸಂಗ ನಡೆದಿದೆ.

ಸರ್ಕಾರದ ಸಚಿವರುಗಳು ಸಮರ್ಪಕ ಉತ್ತರ ನೀಡದೇ ಇರುವುದು, ಪದೇ ಪದೇ ಕಲಾಪಕ್ಕೆ ಗೈರಾಗುತ್ತಿರುವುದಕ್ಕೆ ಸಿಟ್ಟಾದ ಸ್ಪೀಕರ್‌ ಸಿಟ್ಟಾಗಿ ಅರ್ಧದಿಂದಲೇ ಕಲಾಪದಿಂದ ಹೊರ ನಡೆದರು.

ಮೂರು ಸಲ ನಾನು ಸಚಿವರಿಗೆ ಹೇಳಿದರೂ ಸುಧಾರಣೆ ಕಂಡು ಬರುತ್ತಿಲ್ಲ. ಸಂಬಂಧಿಸಿದ ಸಚಿವರು ಬಂದು ಸ್ಪಷ್ಟತೆ, ಕಾರಣ ಕೊಡಬೇಕು. ಅಲ್ಲಿಯವರೆಗೂ ನಾನು ಸದನ ನಡೆಸುವುದಿಲ್ಲ ಎಂದು ಗರಂ ಆಗಿ ಹೇಳಿ ಸದನದಿಂದ ಎದ್ದು ಹೋದರು.