ಬೆಂಗಳೂರು: ಇತ್ತೀಚೆಗೆ ಪ್ಯಾಲೆಸ್ತೀನ್ ಕುರಿತು ದಿನಕ್ಕೊಂದು ಸುದ್ಧಿ ಕೇಳಿ ಬರುತ್ತಲೇ ಇದೆ. ಇದೀಗ ಮತ್ತೊಂದು ಪ್ಯಾಲೆಸ್ತೀನ್ ಸಂಬಂಧಸಿದಂತೆ ಸುದ್ದಿ ಬಂದಿದೆ. ನಗರದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿ ಹಲವರನ್ನು ವಶಕ್ಕೆ ಪಡೆದ ಘಟನೆ ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ನಗರದ ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರು ಸೇರಿ ಹಲವರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನಂತರ ಠಾಣೆಗೆ ಕರೆದೊಯ್ದ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿ ಮಹಿಳೆ ಹೈಡ್ರಾಮಾ ಸೃಷ್ಟಿಸಿದ್ದಾಳೆ.

