ಬೆಂಗಳೂರು: ‘ನಮ್ಮ ಮೆಟ್ರೊ’ ನೇರಳೆ ಮಾರ್ಗದಲ್ಲಿ ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಮೈಸೂರು ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಏಪ್ರಿಲ್‌ 5ರಂದು ಬೆಳಿಗ್ಗೆ ಎರಡು ಗಂಟೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.

ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೊ ನಿಲ್ದಾಣಗಳ ನಡುವೆ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಬೆಳಿಗ್ಗೆ 7ರಿಂದ 9ರವರೆಗೆ ತಾತ್ಕಾಲಿಕವಾಗಿ ಮೆಟ್ರೊ ಸಂಚಾರ ಇರುವುದಿಲ್ಲ.

ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ, ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ವೈಟ್‌ಫೀಲ್ಡ್‌ (ಕಾಡುಗೋಡಿ)ವರೆಗೆ ಎಂದಿನ ವೇಳಾಪಟ್ಟಿಯಂತೆ ಮೆಟ್ರೊ ರೈಲುಗಳು ಸಂಚರಿಸಲಿವೆ. ಮಾದಾವರ–ರೇಷ್ಮೆ ಸಂಸ್ಥೆ ನಡುವಿನ ಹಸಿರು ಮಾರ್ಗ ಮತ್ತು ಆರ್‌.ವಿ. ರಸ್ತೆ–ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ತಿಳಿಸಿದ್ದಾರೆ.