ಬೆಂಗಳೂರು : ರಾಜ್ಯದಲ್ಲಿ ಚಳಿ ಆರಂಭವಾಗಿದ್ದು, ಈ ನಡುವೆ ಮುಂದಿನ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಮಳೆ ಸುರಿಯಲಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನವೆಂಬರ್ 27ರವರೆಗೂ ಮಳೆ ಇರಲಿದೆ.

