ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆ ಸಂಜೆಯಿಂದ ರಾತ್ರಿವರೆಗೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿತ್ತು. ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಸೃಷಿಯಾಗಿದ್ದು, ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ.

ಜೊತೆಗೆ ತುಮಕೂರು, ಚಿತ್ರದುರ್ಗ, ಮಂಡ್ಯ, ರಾಮನಗರ ಮೈಸೂರು, ಕೋಲಾರ, ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.