ಬೆಂಗಳೂರು : ರಾಜ್ಯದಲ್ಲಿ ಮುಂದಿನ 3 ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಮುಖವಾಗಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಪ್ರತೇಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಕೆಲವೆಡೆಯೂ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ.

