ಬೆಂಗಳೂರು: ಇಡೀ ರಾಜ್ಯಾದ್ಯಂತ ಚಳಿಗಾಲದ ಮಧ್ಯೆಯೂ ಹಲವೆಡೆ ಮಳೆರಾಯನ ಅಬ್ಬರ ಜೋರಾಗಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡಿಸೆಂಬರ್ 7ನೇ ತಾರೀಕು ಮೋಡ ಕವಿ ವಾತಾವರಣ ಇರಲಿದೆ. ಬಳಿಕ ನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ವ್ಯಾಪಕ ಮಳೆ ಬೀಳಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲೂ ಮಳೆ ಬೀಳಲಿದೆ. ಇನ್ನುಳಿದಂತೆ ಯಾವುದೇ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.

