ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಿಳಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜೆ ಹಳ್ಳಿ ನಿವಾಸಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಡಿಜೆ ಹಳ್ಳಿ ನಿವಾಸಿ ಇಮಾರ್ ಶರೀಫ್ ಎಂದು ಗುರುತಿಸಲಾಗಿದೆ. ಈತನ ಬಳಿ ನಲವತ್ತು ಎಂಡಿಎಂಎ ಮಾತ್ರೆಗಳು ಪತ್ತೆಯಾಗಿವೆ.
ರೇವ್ ಪಾರ್ಟಿಯಲ್ಲಿ ಆಯೋಜಕರ ಮೂಲಕ ಡ್ರಗ್ಸ್ ನೀಡಲಾಗಿತ್ತು. ಈತ ಹೈಟೆಕ್ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಡ್ರಗ್ಸ್ ಸಹಿತ ಬರುವಂತೆ ಶರೀಫ್ಗೆ ತಿಳಿಸಲಾಗಿತ್ತು. ಅದ್ರಂತೆ ವಿವಿಧ ಮಾದರಿಯ ಡ್ರಗ್ಸ್ ತೆಗೆದುಕೊಂಡು ಈತ ಪಾರ್ಟಿಗೆ ಬಂದಿದ್ದ.
ಪಾರ್ಟಿಯಲ್ಲಿ ಹಾಜರಾಗಿ ಡ್ರಗ್ಸ್ ಸೇವನೆ ಹಿನ್ನಲೆ ತೆಲುಗು ನಟಿ ಹೇಮಾ, ಆಶಿ ರಾಯ್ ಸೇರಿ ಇದುವರೆಗೆ ಇಪತ್ತಕ್ಕೂ ಹೆಚ್ಚು ಜನರಿಗೆ ಸಿಸಿಬಿ ನೋಟಿಸ್ ನೀಡಿದೆ. ಆದರೆ ಯಾರು ಕೂಡ ಇದುವರೆಗೆ ಸಿಸಿಬಿ ವಿಚಾರಣೆಗೆ ಹಾಜರಾಗಿಲ್ಲ.

