ಬೆಂಗಳೂರು: ರೇವಣ್ಣ ವಿರುದ್ಧ ದಾಖಲಾಗಿದ್ದ 2 ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜೂನ್ 14ಕ್ಕೆ ಹೈಕೋರ್ಟ್ ಮೂಂದೂಡಿದೆ.
ಹೈಕೋರ್ಟ್‌ನ ನ್ಯಾ. ಕೃಷ್ಣ ಧೀಕ್ಷಿತ್ ಅವರಿದ್ದ ಪೀಠ ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಇದೇ ವೇಳೆ ರೇವಣ್ಣ ಜಾಮೀನು ರದ್ದು ಮಾಡಲು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯೂ ಮುಂದೂಡಿಕೆ.
2 ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ಗೆ ಮಾಜಿ ಸಚಿವ ಎಚ್.ಡಿ ರೇವಣ್ಣ ಅರ್ಜಿ ಸಲ್ಲಿಸಿದ್ದರು.
ಹೊಳೆನರಸೀಪುರದಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣಗಳಲ್ಲಿ ಹುರುಳಿಲ್ಲ, ಇದು ರಾಜಕೀಯ ಪ್ರೇರಿತವಾಗಿದೆ. ಹೀಗಾಗಿ ಎಫ್‌ಐಆರ್‌ಗಳನ್ನು ರದ್ದು ಮಾಡಬೇಕು ಎಂದು ರೇವಣ್ಣ, ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

