ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾನು ಸಿಎಂ ಆಗುತ್ತೇನೆ, ವಿಜಯಪುರದಿಂದ ಸಿಎಂ ಆದರೆ ನಾನೇ ಆಗುವುದು. ಶಿವಾನಂದ ಪಾಟೀಲ್‌ ಅಂತೂ ಆಗಲ್ಲ ಅಂತ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಆಗೋಕೆ ಸೀನಿಯಾರಿಟಿ ಬೇಕಿಲ್ಲ. ಅವರು ಜನತಾ ದಳದಿಂದ ಕಾಂಗ್ರೆಸ್‌ಗೆ ಬಂದಿದ್ದಾರೆ ಎಂದು ಸಚಿವ ಶಿವಾನಂದ ಪಾಟೀಲ್ ವಿರುದ್ಧ ವ್ಯಂಗ್ಯವಾಡಿದರು. ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಅಂತೂ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಅವರೇ ಇರ್ತಾರೆ ಅಂತಾ ಸ್ಪಷಪಡಿಸಿದರು.