ಬೆಂಗಳೂರು: ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡುವ ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತ ಪ್ರಯಾಣಿಕರಿಗೆ ನಮ್ಮ ಸರ್ಕಾರವು ಉಚಿತವಾಗಿ ಸ್ಮಾರ್ಟ್ಕಾರ್ಡ್ ನೀಡಲು ನಿರ್ಧರಿಸಿದೆ.
ಈ ಸಂಬಂಧ ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸ್ಮಾರ್ಟ್ಕಾರ್ಡ್ ವಿತರಿಸುವ ನಿರ್ಣಯಕ್ಕೆ ಬರಲಾಗಿದ್ದು, ಇನ್ನುಮುಂದೆ ಆಧಾರ್ ಕಾರ್ಡ್ ಬದಲು ಸ್ಮಾರ್ಟ್ ಕಾರ್ಡ್ ಬಳಸಿ ಮಹಿಳೆಯರು, ಲಿಂಗತ್ವ ಅಲ್ಪಸಂಖ್ಯಾತರು ನಿಶ್ಚಿಂತರಾಗಿ ಪ್ರಯಾಣಿಸಬಹುದಾಗಿದೆ.

