ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್​ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್​ನಲ್ಲಿ ವಾದಿಸಲು ರಾಜ್ಯ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್​ಪಿಪಿಯಾಗಿ ನೇಮಕ ಮಾಡಿತ್ತು.

ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ಜಾಯ್ನಾ ಕೊಥಾರಿ ಅವರು ಇಂದು(ಜೂನ್ 11) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ.