ಬೆಂಗಳೂರು: ವಿಧಾನಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಶ್ರೀಮತಿ ಲಕ್ಷ ಹೆಬ್ಬಾಳ್ಳರ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಶ್ರೀಮತಿ ಶಾಮ್ಲಾ ಇಟ್ಬಾಲ್ ಭಾ.ಆ.ಸೇ. ಇವರ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಭಾಗವಹಿಸಿದ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಶೆಟ್ಟಿ ಹಾಗೂ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಸೋಮನಾಥ್ ಮಹಾಜನ್ ಶೆಟ್ಟರ್ ಮನವಿ ಸಮರ್ಪಣೆ ಮಾಡಿ ಸಚಿವೆ ಅವರಿಗೆ ವಿನಂತಿ ಮಾಡಿದರು.

ರಾಜ್ಯದ ವಿಶೇಷ ಶಾಲೆಗಳಿಗೆ 40 ಶೇಕಡಾ ಅನುದಾನ ಏರಿಕೆ ಮಾಡಬೇಕು ಹಾಗೂ 25 ವರ್ಷ ವಯೋಮಿತಿ ಮೀರಿದ ಮಾನಸಿಕ ಭಿನ್ನ ಸಾಮರ್ಥ್ಯದ ಯುವಕ ಯುವತಿಯರಿಗೆ ವೃತ್ತಿಪರ ಶಿಕ್ಷಣ ಕೇಂದ್ರ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.

