ಬೆಂಗಳೂರು : ದಿನಬಳಕೆ ವಸ್ತುಗಳ ದರ ಏರಿಕೆಗೆ ತತ್ತರಿಸಿಹೋಗಿರುವ ಬೆಂಗಳೂರಿಗರ ಮೇಲೆ ಸರ್ಕಾರ ಮತ್ತೊಂದು ಬರೆ ಎಳೆಯಲು ಮುಂದಾಗಿದೆ. ನಮ್ಮ ಮೆಟ್ರೋ ರೈಲು ಪ್ರಯಾಣ ದರ, ನೀರಿನ ಶುಲ್ಕ, ಬಸ್‌ ಟಿಕೆಟ್‌ ದರ ಏರಿಕೆ ನಂತರ ಇದೀಗ ಮನೆಯಿಮದ ಹೊರಹಾಕುವ ತ್ಯಾಜ್ಯಕ್ಕೂ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರಿನಲ್ಲಿ ಏ.1 ರಿಂದ ಪ್ರತಿ ಮನೆಯಿಂದ ಸಂಗ್ರಹಿಸುವ ಕಸಕ್ಕೂ ಶುಲ್ಕ ವಸೂಲಿಗೆ ಸರ್ಕಾರ ಅನುಮೋದನೆ ನೀಡಿದ್ದು, ನೀವು ತ್ಯಾಜ್ಯವಿಲೇವಾರಿಗೆ ಇನ್ಮೇಲೆ ಫೀಸ್‌ ನೀಡಬೇಕಿದೆ.

ತ್ಯಾಜ್ಯ ಸಂಸ್ಕರಣೆ ಮಾಡದ ಅಪಾರ್ಟ್‌ಮೆಂಟ್‌ಗಳು, ದೊಡ್ಡ ವಾಣಿಜ್ಯ ಸಂಸ್ಥೆಗಳಂತಹ ಬೃಹತ್ ತ್ಯಾಜ್ಯ ಉತ್ಪಾದಕರ ಮೇಲೆ ಪ್ರತಿ ಕೆ.ಜಿ. ತ್ಯಾಜ್ಯಕ್ಕೆ 12 ರೂ. ಬಳಕೆದಾರ ಶುಲ್ಕ ವಿಧಿಸಲು ಸರ್ಕಾರವು ಅವಕಾಶ ನೀಡಿದೆ. ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಬಳಕೆದಾರ ಶುಲ್ಕ ನಿರ್ಧರಿಸಲಾಗುತ್ತದೆ ಎನ್ನಲಾಗಿದೆ.

600 ಚದರ ಅಡಿ ವರೆಗಿನ ಕಟ್ಟಡಗಳು ತಿಂಗಳಿಗೆ 10 ರೂ. ವರ್ಷಕ್ಕೆ 120 ರೂ. ಪಾವತಿಸಬೇಕು. 4,000 ಚದರ ಅಡಿಗಿಂತ ದೊಡ್ಡ ಕಟ್ಟಡಗಳಿಗೆ ತಿಂಗಳಿಗೆ ಗರಿಷ್ಠ 400 ರೂ. ವರ್ಷಕ್ಕೆ 4,800 ರೂ. ಪಾವತಿಸಬೇಕಾಗಿದೆ ಎಂದು ಅಂದಾಜುಸಲಾಗಿದ್ದು, ಸ್ಪಷ್ಟ ವಿವರ ಇನ್ನಷ್ಟೇ ಹೊರಬೀಳಬೇಕಿದೆ