ಬೆಂಗಳೂರು:  ಚಿತ್ರದುರ್ಗ  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ಸಿಕ್ಕಿದೆ. ಈಗಾಗಲೇ ದರ್ಶನ್‌ ಮತ್ತು ಗ್ಯಾಂಗ್‌ ಜೈಲಿನಲ್ಲಿ ಬಂಧಿಯಾಗಿದ್ದಾರೆ. ಚಾರ್ಜ್ ಶೀಟ್‌ನಲ್ಲಿ ರೇಣುಕಾಸ್ವಾಮಿ ಕೊಲೆಯಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳು ಭಾಗಿಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಚಾರ್ಜ್​​​ಶೀಟ್​​​ನಲ್ಲಿ ಕೊಲೆಯಲ್ಲಿ ಮೂವರು ಆರೋಪಿಗಳ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ.

ನಿಖಿಲ್ ನಾಯ್ಕ್, ಕೇಶವಮೂರ್ತಿ ಹಾಗೂ ಕಾರ್ತಿಕ್ ಈ ಮೂವರು ಆರಂಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ತಾವೇ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದಾಗಿ ಸೆರೆಂಡರ್ ಆಗಿದ್ದರು. ಆದರೆ ಈಗ ಈ ಕೊಲೆಯಲ್ಲಿ ಮೂವರ ಪಾತ್ರ ಇಲ್ಲ ಎಂಬುದು ಸಾಬೀತಾಗಿದೆ. ನಿಖಿಲ್ ನಾಯ್ಕ್, ಕೇಶವಮೂರ್ತಿ, ಕಾರ್ತಿಕ್‌ ಮೇಲೆ ಕೊಲೆ ಕೇಸ್‌ ಇಲ್ಲದಿದ್ದರೂ, ಚಾರ್ಜ್​​​ಶೀಟ್​​​ನಲ್ಲಿ 201 ಅಡಿ ಸಾಕ್ಷಿ ನಾಶ ಆರೋಪವಿದೆ. ಮೂವರ ವಿರುದ್ಧ ಸಾಕ್ಷ್ಯ ನಾಶ ಮಾಡಿದ ಆರೋಪವನ್ನು ಪೊಲೀಸರು ಪ್ರಸ್ತಾಪ ಮಾಡಿದ್ದಾರೆ. ಸಾಕ್ಷಿ ನಾಶ ಹಾಗೂ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದಾಗಿ ಉಲ್ಲೇಖಿಸಿದ್ದಾರೆ.