ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಇಂದು ಮಳೆಯಾಗಿದೆ.
ಪೂರ್ವ ಮುಂಗಾರು ಹಾಗೂ ಕರ್ನಾಟಕದ ಒಳನಾಡಿನಲ್ಲಿ ಟ್ರಫ್ ಹಿನ್ನೆಲೆ, ಮಳೆಯಾಗುತ್ತಿದೆ. ಇಂದು ಬೆಂಗಳೂರಿನ ವಿಜಯನಗರ, ಹೊಸಹಳ್ಳಿ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.
ಬಿಸಿಲ ಝಳಕ್ಕೆ ಹೈರಾಣರಾಗಿದ್ದ ಬೆಂಗಳೂರು ಜನ ಮಳೆಯಿಂದ ಕೂಲ್ ಕೂಲ್ ಆಗಿದ್ದಾರೆ. ಸಂಜೆಯ ತಂಪುಗಾಳಿ ಜನರನ್ನ ತಂಪಾಗಿಸಿದೆ. ಆದ್ರೆ ಮಳೆಯಿಂದಾಗಿ ಅಲ್ಲಲ್ಲಿ ಸಂಚಾರದಲ್ಲಿ ಅಸ್ತವ್ಯಸ್ತವೂ ಆಗಿದೆ.
ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದ್ದು, ಇಂದು ಹಾಗೂ ನಾಳೆ ಬೆಂಗಳೂರಿನ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯ ಎಚ್ಚರಿಕೆಯನ್ನು ಹವಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಕೆಲವೆಡೆ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

