ಆನೇಕಲ್: ಬಾಯ್ಲರ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಮುನ್ನಾಸಿಂಗ್ ಮತ್ತು ಲಾಲು ಸಿಂಗ್ ಮೃತ ದುರ್ದೈವಿಗಳು. ಘಟನೆಯಲ್ಲಿ ಸುಮಿತ್ ಮಂಡಲ್ , ವಿಜಯಕುಮಾರ್ ಸಿಂಗ್ ಎಂಬವರ ಸ್ಥಿತಿ ಗಂಭೀರವಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೇತರಿಸುಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

