ಬೆಂಗಳೂರು: ವೈದ್ಯಕೀಯ, ಎಂಜಿನೀಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ಇಚ್ಛೆಯ ಚಾಯ್ಸ್ ದಾಖಲು ಮಾಡುತ್ತಿದ್ದಾರೆ. ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇದೇ ಮೊದಲ ಬಾರಿಗೆ ಆನ್ ಲೈನ್ ಪಾವತಿ ಜಾರಿ ಮಾಡಿದೆ.
ಕೆಇಎ ಇದೇ ಮೊದಲ ಬಾರಿಗೆ ಇಂಟರ್ ನೆಟ್ ಬ್ಯಾಂಕಿಂಗ್, ಡೆಬಿಟ್/ ಕ್ರೆಡಿಟ್ ಕಾರ್ಡ್ ಶುಲ್ಕ ಪಾವತಿಸುವುದಕ್ಕೂ ಅವಕಾಶ ಕಲ್ಪಿಸಿರುವುದರಿಂದ ಇಡೀ ಪ್ರಕ್ರಿಯೆ ಸರಳವಾಗಿದೆ. ಯುಜಿಸಿಇಟಿ-ನೀಟ್ ಕೋರ್ಸ್ಗಳಿಗೆ ಮೊದಲ ದಿನವೇ 16 ಸಾವಿರಕ್ಕೂ ಮಂದಿ ತಮ್ಮ ಇಚ್ಛೆಯ ಚಾಯ್ಸ್ ದಾಖಲು ಮಾಡಿದ್ದಾರೆ. 3000ಕ್ಕೂ ಹೆಚ್ಚು ಮಂದಿ ಶುಲ್ಕ ಪಾವತಿ ಮಾಡಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದಾರೆ.

