ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಸಿಂಚನದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಮೋಡದ ವಾತಾವರಣ ಇರಲಿದೆ.
ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ತುಂತುರು ಹನಿ ಮಳೆ ಅಥವಾ ಮುಂಜಾನೆ ಅಧಿಕ ಹಿಮದ ವಾತಾವರಣದ ಸಾಧ್ಯತೆಗಳಿವೆ. ಮೇಲ್ಸ್ತರದ ಗಾಳಿಯ ಚಲನೆಯಲ್ಲಿ ಮಧ್ಯಾಹ್ನ ನಂತರ ಅರಬ್ಬಿ ಸಮುದ್ರದ ಕಡೆಯಿಂದ ಕರಾವಳಿ ಭಾಗಗಳಿಗೆ ಬೀಸುವ ಕಾರಣದಿಂದ ತುಂತುರು ಮಳೆಯ ಸಾಧ್ಯತೆ ಇದೆ.
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ ಮೋಡದ ವಾತಾವರಣದ ಮುನ್ಸೂಚನೆ ಇದೆ. ಆದರೆ ಮಳೆಯ ಸಾಧ್ಯತೆ ಕಡಿಮೆ ಇದೆ.

