ಬೆಂಗಲೂರು : ಇತ್ತೀಚೆಗೆ ವನ್ಯ ಪ್ರಾಣಿ ಮತ್ತು ಪಕ್ಷಿಗಳು ವಿದ್ಯುತ್‌ ತಂತಿ ತಗುಲಿ ಸಾವನಪ್ಪುತ್ತಿವೆ. ಇತ್ತೀಚಗೆ ಅಶ್ವತ್ಥಾಮ ಆನೆ ಸಾವಿನ ಪತ್ರಿಕಾ ವರದಿ ಆಧರಿಸಿ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡು ಎಲ್ಲ ಎಸ್ಕಾಂಗಳಿಗೆ ಸಿಜೆ ಎನ್​ವಿ ಅಂಜಾರಿಯಾ, ನ್ಯಾ.‌ಕೆ.ವಿ.ಅರವಿಂದ್​ರಿದ್ದ ಪೀಠ ನೋಟಿಸ್ ಜಾರಿ ಮಾಡಿದೆ.

ದಸರಾ ಆನೆ ಅಶ್ವತ್ಥಾಮ ಸಾವಿನ ಕುರಿತು ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್‌ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಹಾಗೂ ನ್ಯಾ| ಕೆ.ವಿ.ಅರವಿಂದ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಅರಣ್ಯ ಇಲಾಖೆ ಪರ ವಕೀಲರು ವಾದ ಮಂಡಿಸಿ, ಆನೆಗಳು ಸೇರಿದಂತೆ ಇತರ ವನ್ಯಜೀವಿಗಳ ಸಾವಿಗೆ ಅರಣ್ಯ ಪ್ರದೇಶದಲ್ಲಿ ಮುಖ್ಯವಾಗಿ ವನ್ಯಜೀವಿಧಾಮ, ಆನೆ ಕಾರಿಡಾರ್‌ ಪ್ರದೇಶಗಳಲ್ಲಿ ಅಳವಡಿಸಲಾಗುವ ಅಸುರಕ್ಷಿತ ವಿದ್ಯುತ್‌ ಮಾರ್ಗಗಳು, ಅರಣ್ಯದಂಚಿನ ಪ್ರದೇಶಗಳ ರೈತರು ತಮ್ಮ ಕೃಷಿ ಜಮೀನುಗಳಿಗೆ ಅನಧಿಕೃತವಾಗಿ ವಿದ್ಯುತ್‌ ಸಂಪರ್ಕ ಪಡೆದುಕೊಳ್ಳುವುದು, ವಿದ್ಯುತ್‌ ತಂತಿ ಬೇಲಿಗಳನ್ನು ಅಳವಡಿಸುವುದು ಮುಖ್ಯ ಕಾರಣವಾಗಿದೆ.

ಈ ವಿಚಾರವಾಗಿ ಕೆಪಿಟಿಸಿಎಲ್‌ ಹಾಗೂ ಎಸ್ಕಾಂಗಳಿಗೆ ಹಲವು ಬಾರಿ ಪತ್ರ ಬರೆಯಲಾಗಿದೆ. ಆದರೆ, ಸೂಕ್ತ ಸ್ಪಂದನೆ ಸಿಕ್ಕಿಲ್ಲ. ಹಾಗಾಗಿ, ಈ ಪ್ರಕರಣದಲ್ಲಿ ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳನ್ನು ಪ್ರತಿವಾದಿಗಳನ್ನಾಗಿ ಮಾಡಬೇಕು ಎಂ