ಬೆಂಗಳೂರು: ಸ್ಕೂಟಿವೊಂದಕ್ಕೆ ಆಟೋ ಟಚ್ ಆಗಿದ್ದಕ್ಕೆ ಹೊರ ರಾಜ್ಯದ ಮಹಿಳೆ ಪನ್ಪೂರಿ ಮಿಶ್ರಾ,(28) ಎಂಬಾಕೆ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ಅಸಭ್ಯವಾಗಿ ವರ್ತಿಸಿದ್ದಳು. ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ ಮಹಿಳೆಯ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನ ಬೆಳ್ಳಂದೂರು ವೃತ್ತದಲ್ಲಿ ಈ ಘಟನೆ ನಡೆದಿತ್ತು. ಟ್ರಾಫಿಕ್​ನಲ್ಲಿ ಸ್ಕೂಟಿಗೆ ಹಿಂಬದಿಯಿಂದ ಆಟೋ ಟಚ್ ಆಗುತ್ತಿದ್ದಂತೆ ಚಾಲಕ ಮತ್ತು ಮಹಿಳೆ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಇಬ್ಬರ ನಡುವೆ ಜಗಳ ಅತಿರೇಕಕ್ಕೆ ತಿರುಗಿದ್ದು ಮಾತಿಗೆ ಮಾತು ಬೆಳೆದು ಆಟೋ ಚಾಲಕನಿಗೆ ಮಹಿಳೆ ಚಪ್ಪಲಿಯಿಂದ ಹೊಡೆದಿದ್ದಾಳೆ.

ಮಹಿಳೆ ವಿರುದ್ಧ FIR ದಾಖಲಾಗಿದೆ. ಈಗ ಮಹಿಳೆಯನ್ನ ಪೊಲೀಸರು ಠಾಣೆಗೆ ಕರೆದುಕೊಂಡು‌ ಬಂದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ, ಮಹಿಳೆ ಪನ್ಪೂರಿ ಮಿಶ್ರಾ, ಬಿಹಾರ ಮೂಲದ ಮಹಿಳೆ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಾಗಿದ್ದಾಳೆ. ಗರ್ಭಿಣಿ ಆಗಿರುವ ಮಹಿಳೆ ಆಸ್ಪತ್ರೆಗೆ ತೆರಳಿ ಬರುತ್ತಿದ್ದಳು.

ಈ ವೇಳೆ ಮಹಿಳೆಯ ದ್ವಿ ಚಕ್ರ ವಾಹನಕ್ಕೆ ಹಿಂದಿನಿಂದ ಆಟೋ ಡಿಕ್ಕಿಯಾಗಿತ್ತು. ಇದನ್ನ ಪ್ರಶ್ನಿಸಿದ್ದಕ್ಕೆ ಆಟೋ ಡ್ರೈವರ್ ಬೈದೆ. ಈ ವೇಳೆ ಕೋಪಗೊಂಡು ಚಪ್ಪಲಿಯಿಂದ ಹಲ್ಲೆ ಮಾಡಿದ್ದೇನೆ ಅಂತ ಬೆಳ್ಳಂದೂರು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾಳೆ.

https://x.com/king_7999_/status/1928824477015568527?