ಬೆಂಗಳೂರು: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಯಾದಗಿರಿ ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ವರ್ಗಾವಣೆಗೆ ಶಾಸಕರು ಹಣ ಕೇಳಿದ್ದಕ್ಕೆ ಸಾವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸರ್ಕಾರದಲ್ಲಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಇಲ್ಲ, ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.
ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಶಾಸಕರು ವರ್ಗಾವಣೆ ದಂಧೆಯಲ್ಲಿ ನೇರ ಪಾಲ್ಗೊಂಡಿದ್ದಾರೆ. ಅಲ್ಲಿನ ಶಾಸಕರು ವರ್ಗಾವಣೆಗೆ ದೊಡ್ಡ ಹಣ ಕೇಳುತ್ತಿದ್ದಾರೆ. ಪಿಎಸ್‌ಐ ಪರಶುರಾಮ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯೇಕು ಎಂದು ಆಗ್ರಹಿಸಿದರು.

