ಬೆಂಗಳೂರು: ಇಂದಿರಾನಗರದ ಹಾಸ್ಟೆಲ್‌ನಲ್ಲಿ ತಂಗಿದ್ದ 28 ವರ್ಷದ ಯುವತಿಯ ಮೇಲೆ ಮಾರ್ಚ್ 11ರಂದು ವ್ಯಕ್ತಿಯೊಬ್ಬ ಕಿರುಕುಳ ನೀಡಿ, ಹಲ್ಲೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.

ಹಾಸ್ಟೆಲ್‌ಗೆ ಅತಿಥಿಯಾಗಿ ಬಂದಿದ್ದ ಯುವತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಿ, ಆಕೆಗೆ ದೈಹಿಕವಾಗಿ ಪೀಡಿಸಲು ಮುಂದಾಗಿದ್ದನು. ಈ ಇಡೀ ಕೃತ್ಯವು ಹಾಸ್ಟೆಲ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳನ್ನು ಪರಿಶೀಲಿಸಿದ ಇಂದಿರಾನಗರ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಮಹಿಳಾ ಸುರಕ್ಷತೆಯ ಬಗ್ಗೆ ರಾಜಧಾನಿಯಲ್ಲಿ ಮತ್ತೆ ಆತಂಕ ಮೂಡಿಸಿರುವ ಈ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ.

View this post on Instagram

A post shared by News Karnataka (@newskarnataka)