Showing 20 of 1954 posts • Page 10 of 98
ಅಮೆರಿಕ ಮತ್ತು ಥಾಯ್ಲೆಂಡ್ನಿಂದ ಚಾಮರಾಜಪೇಟೆಯಲ್ಲಿರುವ ವಿದೇಶಿ ಪೋಸ್ಟ್ ಆಫೀಸ್ಗೆ ಪಾರ್ಸೆಲ್ ಮೂಲಕ ಬಂದಿದ್ದ ಭಾರಿ ಮೌಲ್ಯದ ಮಾದಕ ವಸ್ತುವನ್ನು ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿರುವ ಘಟನೆ ಆನೇಕಲ್ನ ನಾರಾಯಣಪುರದ ಗುಳ್ಳಪ್ಪ ಬಡಾವಣೆಯಲ್ಲಿ ನಡೆದಿದೆ.
ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಜಗತ್ತಿಗೆ ಜ್ಞಾನದ ಜ್ಯೋತಿಯನ್ನು ಬೆಳಗಿದ ಬುದ್ದ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹಿರಿಯ ವಕೀಲರಾದ ಪ್ರೇಮಿಳಾ ನೇಸರ್ಗಿ ಅವರು ಹೇಳಿದರು.
ರಾಷ್ಟ್ರೀಕೃತ ಬ್ಯಾಂಕ್ ಒಂದರಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂಪಾಯಿ ಸಾಲ ಪಡೆಯುವ ಮೂಲಕ ಬ್ಯಾಂಕ್ಗೇ ವಂಚಿಸಿರುವ ಪ್ರಕರಣ ಬೆಂಗಳೂರಿನ ವರ್ತೂರಿನಲ್ಲಿ ಬೆಳಕಿಗೆ ಬಂದಿದೆ.
ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ದಾರುಣವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿರ್ಲಕ್ಷ್ಯ ವಹಿಸಿದ ಗುತ್ತಿಗೆದಾರ ಸಂಸ್ಥೆಯ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಮೆರಿಕದ ಹೆಸರಿನಲ್ಲಿ ನಕಲಿ ಕಾಲ್ ಸೆಂಟರ್ ಸ್ಥಾಪಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೈಬರ್ ವಂಚನೆ ಎಸಗುತ್ತಿದ್ದ ಇಬ್ಬರು ಸಾಫ್ಟ್ವೇರ್ ಇಂಜಿನಿಯರ್ಗಳನ್ನು ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಬಂಧಿಸಿದ್ದಾರೆ.
ರಿವರ್ ರ್ಯಾಫ್ಟಿಂಗ್ಗೆ ಹೋದ ವೇಳೆ ಕರೆಂಟ್ ಶಾಕ್ ಹೊಡೆದು ಪ್ರವಾಸಿಗರೊಬ್ಬರು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿಯ ಖಾಸಗಿ ರೆಸಾರ್ಟ್ನಲ್ಲಿ ನಡೆದಿದೆ.
ರಾಜ್ಯದ ಭಾರೀ ಮಳೆಯಾಗುತ್ತಿದ್ದು 17 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಾದ್ಯಂತ ಮೇ 29ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದು ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಬುದ್ಧ ಮತ್ತು ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಹಾಗೂ 22 ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರದಾನ ಕಾರ್ಯದರ್ಶಿ ಕಿಶೋರ್ ಕುಮಾರ್ ಹೇಳಿದರು
ಹುಲಿಯೊಂದು ಒಂದೇ ಸಮಯದಲ್ಲಿ ದಾಳಿ ನಡೆಸಿ ನಾಲ್ವರು ಮಹಿಳೆಯರನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.
ಆಫ್ರಿಕಾದ ಹಲವು ಭಾಗಗಳಲ್ಲಿ ಎಬೋಲಾ ವೈರಸ್ ಹಾವಳಿ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.
ನಗರದ ವಿವೇಕಾನಂದ ನಗರದ ನರಸಿಂಹಯ್ಯ ಬಡಾವಣೆಯಲ್ಲಿ ಮದ್ಯದ ನಶೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚನ್ನಪಟ್ಟಣದ ಶಿಕ್ಷಣ ಇಲಾಖೆಯ ಅಕ್ಷರ ದಾಸೋಹ ವಿಭಾಗದ ಎಫ್ಡಿಎ ಯೋಗೀಶ್ ಕುಮಾರ್ (41) ಅವರನ್ನು ಕೊಲೆ ಮಾಡಿದ್ದ ಮೂವರನ್ನು ಐಜೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಮೆರಿಕದ ಪ್ರಸಿದ್ಧ ಲೆಕ್ಕಪತ್ರ ಸಂಸ್ಥೆ ‘ಎಂ.ಎಸ್. ಕ್ವಿಕ್ ಬುಕ್’ ಹೆಸರಿನಲ್ಲಿ ನಗರದ ಆಗ್ನೇಯ ವಿಭಾಗದಲ್ಲಿ ತೆರೆಯಲಾಗಿದ್ದ ನಾಲ್ಕು ನಕಲಿ ಕಾಲ್ ಸೆಂಟರ್ಗಳ ಮೇಲೆ ದಾಳಿ ನಡೆಸಿರುವ ಸೈಬರ್ ಕಮಾಂಡ್ ಸೆಂಟರ್ನ ಅಧಿಕಾರಿಗಳು, ಅಂದಾಜು ₹40 ಕೋಟಿ ಅಕ್ರಮವನ್ನು ಬಯಲಿಗೆ ಬಂದಿದೆ. ಹೊರ ರಾಜ್ಯದ ಇಬ್ಬರನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಭಾರೀ ಮಳೆ ಮತ್ತು ಬಿರುಗಾಳಿಯ ಆರ್ಭಟಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರ ಸಂಪೂರ್ಣ ವ್ಯತ್ಯಯಗೊಂಡಿದೆ.
ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಕ್ರೋಚ್ ಜನತಾ ಪಾರ್ಟಿಯ ‘ಎಕ್ಸ್’ ಖಾತೆಗೆ ಭಾರತದಲ್ಲಿ ನಿರ್ಬಂಧ ಹೇರಲಾಗಿದೆ.
ಆಫ್ರಿಕಾ ಖಂಡದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಹಾಗೂ ಕರ್ನಾಟಕ ರಾಜ್ಯದಲ್ಲಿ ತೀವ್ರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹೆಬ್ಬಾಳ ಪೊಲೀಸರು ದೆಹಲಿ ಮೂಲದ ಬೃಹತ್ ಡ್ರಗ್ಸ್ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.