Showing 20 of 1954 posts • Page 13 of 98
ನಗರದ ಲಗ್ಗೆರೆ ಬಸ್ ನಿಲ್ದಾಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಸೇರಿದ ಬಸ್ ಒಂದು ಭೀಕರ ಅಗ್ನಿ ಅವಘಡಕ್ಕೆ ಆಹುತಿಯಾಗಿದೆ.
ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಗಳಿಗೆ (ಸೆಸ್ಕ್-ಮೈಸೂರು) 2024-25ನೇ ಸಾಲಿನಲ್ಲಿ ಉಂಟಾಗಿರುವ ಆದಾಯ ಕೊರತೆ ತುಂಬಿಕೊಳ್ಳಲು 2026-27ನೇ ಸಾಲಿನಲ್ಲಿ ಬೆಸ್ಕಾಂ ಗ್ರಾಹಕರಿಂದ ಪ್ರತಿ ಯುನಿಟ್ಗೆ 56 ಪೈಸೆ ಹಾಗೂ ಸೆಸ್ಕ್ ಗ್ರಾಹಕರಿಂದ ಪ್ರತಿ ಯುನಿಟ್ಗೆ 15 ಪೈಸೆಯಂತೆ ಹೆಚ್ಚುವರಿಯಾಗಿ ಸಂಗ್ರಹಿಸಲು ಕೆಇಆರ್ಸಿ ಆದೇಶ ಮಾಡಿದೆ.
ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಹಾಕಿರುವ ಘಟನೆ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ಎ.18ರ ಶನಿವಾರ ನಡೆದಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಮಾರ್ಗಸೂಚಿಗಳನ್ನು ಹೊರಡಿಸಿದೆ.
17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟ್ರಕ್ ಯಾತ್ರಿಕರ ಮೇಲೆ ಹರಿದ ಪರಿಣಾಮ 6 ಯಾತ್ರಿಕರು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಗುಜರಾತ್ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಸ್ಯಾಟ್ಲೈಟ್ ಬಸ್ ನಿಲ್ದಾಣದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರನ್ನು ಪಾರ್ಕಿಂಗ್ ಸಿಬ್ಬಂದಿ ರಿವರ್ಸ್ ತೆಗೆಯುವಾಗ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಸಿಲ ತಾಪ ಏರುತ್ತಿರುವ ನಡುವೆಯೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಿಲಿಕಾನ್ ಸಿಟಿಯ ವ್ಯಾಪಾರ ಕೇಂದ್ರ ಚಿಕ್ಕಪೇಟೆಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕಪೇಟೆ ಸರ್ಕಲ್ ಬಳಿ ಇರುವ ‘ಫಾಸ್ಟ್ ಫುಡ್’ ಹೆಸರಿನ ಹೋಟೆಲ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ.
ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದ ಬೆಂಗಳೂರಿಗೆ ಇಂದು ಮಳೆಯಾಗಿದೆ.
ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ), ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (ಬಯೋಮೆಟ್ರಿಕ್) ಆಧಾರಿತ ಸ್ಪರ್ಶರಹಿತ ಪ್ರಯಾಣದ ಅನುಭವ ನೀಡಲು ಸಜ್ಜಾಗಿದೆ.
ತಾನು ಪ್ರೀತಿಸುತ್ತಿದ್ದ ಯುವತಿ ಮದುವೆಯಾಗಲು ನಿರಾಕರಿಸಿದ ಕಾರಣದಿಂದ ಬೇಸತ್ತ ಯುವಕನೊಬ್ಬ ತನ್ನ ಜೀವನವನ್ನೇ ಅಂತ್ಯಗೊಳಿಸಿಕೊಂಡ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಲ್ಲಿ ನಡೆದಿದೆ.
ರಾಜ್ಯದ ಹವಾಮಾನದಲ್ಲಿ ಮಹತ್ವದ ಏರುಪೇರು ಕಂಡುಬಂದಿದೆ. ಮುಂಬರುವ ಎರಡು ದಿನಗಳ ಹವಾಮಾನ ಮುನ್ಸೂಚನೆಯು ರಾಜ್ಯದ ವಿವಿಧ ಭಾಗಗಳಲ್ಲಿ ವಿಭಿನ್ನ ಹವಾಮಾನ ಪರಿಸ್ಥಿತಿಗಳನ್ನು ಸೂಚಿಸಿದೆ.
ದೇಶದ ಪ್ರಮುಖ ವಿಮಾನಯಾನ ಸಂಸ್ಥೆ ‘ಆಕಾಸ ಏರ್’, ತನ್ನ ಇನ್-ಫ್ಲೈಟ್ ಆಹಾರ ಸೇವೆಯಾದ ‘ಕೆಫೆ ಆಕಾಸ’ ಮೂಲಕ ಈಸ್ಟರ್ ಹಬ್ಬದ ಪ್ರಯುಕ್ತ ವಿಶೇಷ ಭೋಜನವನ್ನು ಬಿಡುಗಡೆ ಮಾಡಿದೆ.
ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ನೈಜೀರಿಯಾ ದೇಶದ ಪ್ರಜೆಯೊಬ್ಬನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿ, ₹25.63 ಕೋಟಿ ವೆಚ್ಚದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಇರಾನ್ – ಅಮೆರಿಕ, ಇಸ್ರೇಲ್ ನಡುವಿನ ಯುದ್ಧವು ತಾರ್ಕಿಕ ಅಂತ್ಯ ಕಾಣುವ ಲಕ್ಷಣ ಕಾಣಿಸುತ್ತಿದೆ.