Showing 20 of 1882 posts • Page 14 of 95
ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಫ್ಯಾನ್ಸಿ ಸ್ಟೋರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕರ್ನಾಟಕದ 11 ಜಿಲ್ಲೆಗಳಲ್ಲಿ ದಿಢೀರ್ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮ್ಯಾಟ್ರಿಮೋನಿಯಲ್ನಲ್ಲಿ ಪರಿಚಯವಾದ ಯುವತಿಯೊಬ್ಬಳು ಕ್ರಿಪ್ಟೋ ಹೂಡಿಕೆ ನೆಪದಲ್ಲಿ ಯುವಕನಿಗೆ 21.11 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿ ಕೆಲವೊಂದು ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಎಮ್ ಡಿ ಎಮ್ ಎ ಪೂರೈಸುತ್ತಿದ್ದ ಪೆಡ್ಲರ್ ಗಳನ್ನು ಮೈಸೂರಲ್ಲಿ ಬಂಧಿಸಲಾಗಿದೆ.
ರಾಜ್ಯದಲ್ಲಿ ಈ ವರ್ಷ ಬೇಸಿಗೆಯು ನಿರೀಕ್ಷೆಗಿಂತ ಮೊದಲೇ ಆರಂಭವಾಗಿದ್ದು, ಫೆಬ್ರವರಿಯಲ್ಲೇ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಹೀಗಿರುವಾಗ ತಾಪಮಾನ ಇನ್ನಷ್ಟು ಏರಿಕೆಯಾಗುವ ಮತ್ತು ಈ ವರ್ಷ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಹೆಸರಘಟ್ಟ ಹೋಬಳಿಯ ಬ್ಯಾತಾ-ಸೀರೇಸಂದ್ರ ಗ್ರಾಮದಲ್ಲಿ ಭಾನುವಾರ ಗ್ರಾಮದಲ್ಲಿ ನಡೆದಿದೆ.
ಅಸುರಕ್ಷಿತ ಹಂಪ್ ಕಾರಣದಿಂದ ಬೈಕ್ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ ಪರಿಣಾಮ ಇಬ್ಬರು ಯುವತಿಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸಿಗರೇಟ್ ನ ದುಡ್ಡು ಕೇಳಿದ್ದಕ್ಕೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ಹೊರವಲಯದಲ್ಲಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿ ನಡೆದಿದೆ.
ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಟ್ರ್ಯಾಪ್ ಆದ ಪ್ರಕರಣದಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿದೆ. ಈ ವಾರಾಂತ್ಯದಲ್ಲಿ ಚಿನ್ನ
16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್ನಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಗೋದಾಮು ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿರುವ ಘಟನೆ ನೆಲಮಂಗಲ ರಸ್ತೆಯ ಮಾಕಳಿ ಬಳಿ ನಡೆದಿದೆ.
ವರ್ಕ್ ಫ್ರಮ್ ಹೋಮ್ ಉದ್ಯೋಗದ ಆಫರ್ನಲ್ಲಿದ್ದ ಲಾಭದ ಆಸೆಗೆ ಮರುಳಾಗಿ, ಬೆಂಗಳೂರಿನ 55 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ 11.3 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.
ಬಿಸಿಲಿನಿಂದ ಕಂಗಾಲಾಗಿರೋ ಜನರಿಗೆ ಮಳೆ ಸಿಂಚನ ಆಗಲಿದೆ. ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಮಗ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ಗಾರ್ಡನ್ ಸಿಟಿ ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಔಷಧೀಯ ಸಸ್ಯ ಮಂಡಳಿ, ಆಯುಷ್ ಸಚಿವಾಲಯ (National Medicinal Plants Board, Ministry of AYUSH) , ಭಾರತ ಸರ್ಕಾರ, ನವದೆಹಲಿ ಇವರಿಂದ “Species Specific Campaign on Shatavari – For Better Health” ಅಭಿಯಾನದಡಿ ಪ್ರತಿಷ್ಠಿತ ಶತಾವರಿ ಯೋಜನೆ ಮಂಜೂರಾಗಿದೆ.
ಕರ್ನಾಟಕ ಮತ್ತು ಗೋವಾ ನಡುವಿನ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ ಒಂದು ಕ್ರಮದಲ್ಲಿ, ರೈಲ್ವೆ ಸಚಿವಾಲಯವು ಯಶವಂತಪುರ ರೈಲು ನಿಲ್ದಾಣ ಮತ್ತು ಮಡಗಾಂವ್ ರೈಲು ನಿಲ್ದಾಣದ ನಡುವೆ ಕರಾವಳಿ ರೈಲ್ವೆ ಪ್ರದೇಶದ ಮೂಲಕ ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ಸೇವೆಯನ್ನು ಪ್ರಸ್ತಾಪಿಸಿದೆ.