Showing 20 of 1954 posts • Page 16 of 98
ಇಂದಿರಾನಗರದ ಹಾಸ್ಟೆಲ್ನಲ್ಲಿ ತಂಗಿದ್ದ 28 ವರ್ಷದ ಯುವತಿಯ ಮೇಲೆ ಮಾರ್ಚ್ 11ರಂದು ವ್ಯಕ್ತಿಯೊಬ್ಬ ಕಿರುಕುಳ ನೀಡಿ, ಹಲ್ಲೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.
ರಾಜ್ಯದ 12ಕ್ಕೂ ಹೆಚ್ಚು ಜಿಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಗುಡುಗು, ಸಿಡಿಲು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ.
ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೆನಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ಸಭಾತ್ಯಾಗ ಮಾಡಿದ ಅಚ್ಚರಿಯ ಪ್ರಸಂಗ ನಡೆದಿದೆ.
ಮುಂದಿನ ಮೂರ್ನಾಲ್ಕು ದಿನ ವಿವಿಧ ಭಾಗಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದೇಶದಲ್ಲಿ ಗ್ಯಾಸ್ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಉಂಟಾಗಬಹುದು ಎಂಬ ಆತಂಕದ ನಡುವೆಯೇ, ದೇಶದಲ್ಲಿ ಎಲ್ಲಿಯೂ ಗ್ಯಾಸ್ ಅಥವಾ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಡುಗೆ ಅನಿಲದ ಕೊರತೆ ಹೆಚ್ಚಾಗುತ್ತಿದ್ದಂತೆ ಸಮಸ್ಯೆ ಗಂಭೀರವಾಗಿದೆ. ಕೆಲವು ಮಧ್ಯವರ್ತಿಗಳು ಹೆಚ್ಚುವರಿ ಹಣ ನೀಡುವವರಿಗೆ ಮಾತ್ರ ಸಿಲಿಂಡರ್ ಒದಗಿಸುತ್ತಿರುವುದಾಗಿ ಆರೋಪ ಕೇಳಿಬಂದಿದೆ. ಬುಕ್ಕಿಂಗ್ ಪ್ರಕ್ರಿಯೆಯನ್ನು ತಡೆದು ಗ್ರಾಹಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಏಜೆನ್ಸಿಗಳ ವಿರುದ್ಧ ದೂರುಗಳೂ ಬಂದಿವೆ. ಹೀಗಾಗಿ ಅಧಿಕಾರಿಗಳು ಅಕ್ರಮ ಸಂಗ್ರಹದ ವಿರುದ್ಧ ಕ್ರಮ ಆರಂಭಿಸಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಣ ಕ್ಷೇತ್ರದ ನೈತಿಕತೆಯನ್ನೇ ಪ್ರಶ್ನಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಕೇವಲ ಎರಡು ನಿಮಿಷ ತಡವಾಗಿ ಬಂದ ಕಾರಣಕ್ಕೆ, ಮೊದಲ ತರಗತಿಯ ಪುಟ್ಟ ಮಗುವನ್ನು ಸುಮಾರು ಎರಡು ಗಂಟೆಗಳ ಕಾಲ ಸುಡುವ ಬಿಸಿಲಿನಲ್ಲಿ ನಿಲ್ಲಿಸುವ ಮೂಲಕ ಶಾಲೆ ಅಮಾನವೀಯ ಶಿಕ್ಷೆ ನೀಡಿದೆ.
ನೀರಿನ ಸಂಪ್ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಕಾಲೇಜು ಮುಗಿಸಿ ಗೇಟ್ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ಸೂರ್ಯನ ಶಾಖ ಜೋರಾಗಿದ್ದು, ಮಾ. 15ರಿಂದ 17ರವರೆಗೆ ರಾಜ್ಯದ ವಿವಿಧೆಡೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್ನಿಂದಾಗಿ ಒಂದೆಡೆ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿದೆ. ಮತ್ತೊಂದೆಡೆ ಸಿಲಿಂಡರ್ ಕಳ್ಳರ ಹಾವಳಿ ಹೆಚ್ಚಾಗಿದೆ. ಚನ್ನಪಟ್ಟಣದ ಕನಕನಗರದ ಕೃಷ್ಣಪ್ಪ ಎಂಬುವವ ಮನೆಯಲ್ಲಿ ಸಿಲಿಂಡರ್ ಕಳ್ಳತನ ಮಾಡಲಾಗಿದೆ.
ಹಾಡ ಹಗಲೇ ವ್ಯಕ್ತಿಯ ಮೇಲೆ ಡೆಡ್ಲಿ ಅಟ್ಯಾಕ್ ನಡೆದಿದ್ದು, ಕಿಡಿಗೇಡಿಗಳು ವ್ಯಕ್ತಿ ಒಬ್ಬನ ಮೇಲೆ 68 ಬಾರಿ ಮಚ್ಚಿನಿಂದ ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಮಾಗಡಿ ರಸ್ತೆ ಬದಿಯಲ್ಲಿ ನಡೆದಿದೆ.
ಇರಾನ್ ಮತ್ತು ಇಸ್ರೇಲ್ ಕದನದಿಂದ ಸಂಪೂರ್ಣವಾಗಿ ಕಮರ್ಷಿಯಲ್ ಗ್ಯಾಸ್ ಬಂದಾಗಿದೆ. ಗ್ಯಾಸ್ ಸಿಲಿಂಡರ್ ಬಂದ್ ಆದ ಹಿನ್ನೆಲೆ ಸಂಪೂರ್ಣವಾಗಿ ಹೋಟೆಲ್ ಮಾಲೀಕರು ಸೌದೆ ಒಲೆಗಳ ಮೊರೆ ಹೋಗಿದ್ದು, ಸೌದೆ ಮೇಲೆಯೇ ಉಪಹಾರ, ಊಟ ತಯಾರಿಸುತ್ತಿದ್ದಾರೆ.
ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಉಸಿರುಗಟ್ಟಿಸಿ ವೃದ್ಧೆಯನ್ನು ಕೊಲೆ ಮಾಡಿದ ಕಳ್ಳರು, ಚಿನ್ನದ ಸರ, ಬಳೆ, ಓಲೆ ಕಿತ್ತುಕೊಂಡು ಹೋಗಿದ್ದಾರೆ.
ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ ) ಇತ್ತೀಚೆಗೆ 8ನೇ ತರಗತಿಗೆ ಪರಿಚಯಿಸಿದ್ದ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕವನ್ನು ವಾಪಸ್ ಪಡೆದುಕೊಂಡು ಬಹಿರಂಗವಾಗಿ ಕ್ಷಮೆಯಾಚಿಸಿದೆ.
ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದ್ದು, ಸ್ಕ್ರಾಪ್ ಗೋದಾಮಿಗೆ ಬೆಂಕಿ ಬಿದ್ದ ಘಟನೆ ಚಿಕ್ಕಪೇಟೆಯಲ್ಲಿ ನಡೆದಿದ್ದು, ಆಕಸ್ಮಿಕವಾಗಿ ತಗುಲಿದ ಬೆಂಕಿಯಿಂದಾಗಿ ಇಡೀ ಗೋದಾಮು ಸಂಪೂರ್ಣ ಸುಟ್ಟು ಕರಕಲಾಗಿದೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಆಗಿದ್ದಕ್ಕೆ ಮನನೊಂದು ವ್ಯಕ್ತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರದ ಹೆಬ್ಬಾಳದಲ್ಲಿ ನಡೆದಿದೆ.
ಇರಾನ್–ಇಸ್ರೇಲ್ ಸಂಘರ್ಷ ಹಿನ್ನಲೆಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಚಾರ ವ್ಯತ್ಯಯವಾಗಿದ್ದು, 24 ವಿಮಾನಗಳ ಹಾರಾಟ ರದ್ದಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಹಾಗೂ ಆಕೆಯ ತಂದೆ ಮತ್ತು ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ.
ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು -ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ.