Showing 20 of 1954 posts • Page 17 of 98
ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳ ರಾಜಕೀಯ ವಲಯದಲ್ಲಿ ಇಂದು ಗಮನ ಸೆಳೆಯುವ ಬೆಳವಣಿಗೆಯೊಂದು ನಡೆದಿದೆ. ಕೆಲವು ಕಾಲ ಸಕ್ರಿಯ ರಾಜಕಾರಣದಿಂದ ದೂರವಾಗಿದ್ದ ಜನತಾದಳ ಪಕ್ಷದ ಹಳೆಯ ಮುಖಂಡರು ಇದೀಗ ಮತ್ತೆ ರಾಜಕೀಯ ರಂಗ ಪ್ರವೇಶಿಸಿದ್ದು, ಜಿಲ್ಲೆಯ ರಾಜಕೀಯ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬುವ ಲಕ್ಷಣಗಳು ಕಾಣಿಸುತ್ತಿವೆ.
ಎಲ್ಪಿಜಿ ದರ ಏರಿಕೆಯಾಗಿದ್ದು, ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದ ನಿಷೇಧಿತ, ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮಾಡುತ್ತಿದ್ದವರ ವಿರುದ್ಧ ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಿನ್ನೆ (ಮಾ.6) ಸಂಜೆಯಿಂದ ತಡರಾತ್ರಿವರೆಗೆ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 295 ಮಂದಿಗೆ ದಂಡ ವಿಧಿಸಲಾಗಿದೆ.
ಅಕ್ರಮ ಬಾಂಗ್ಲಾವಲಸಿಗರು ಹಾಗೂ ವೀಸಾ ಅವಧಿ ಮುಕ್ತಾಯಗೊಂಡವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ನಗರ ಪೊಲೀಸರು, ಮಾ.6ರಂದು 124 ಮಂದಿ ಅಕ್ರಮ ಬಾಂಗ್ಲಾವಲಸಿಗರನ್ನು ಬಂಧಿಸಿದ್ದಾರೆ.
ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಸಿಂಚನದ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
10 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ಕೇರಳ ಮೂಲದ ಇಬ್ಬರನ್ನ ಸಿಸಿಬಿ ನಾರ್ಕೊಟಿಕ್ಸ್ ತಂಡ ಬಂಧಿಸಿದ ಘಟನೆ ಬಾಗಲೂರಿನ ಪ್ರೆಸ್ಟೀಜ್ ಫೈನ್ ಬೇಕರಿ ಪಾರ್ಕ್ನ ಫ್ಲಾಟ್ವೊಂದರಲ್ಲಿ ನಡೆದಿದೆ.
ಇಸ್ರೇಲ್-ಇರಾನ್ ಯುದ್ಧದಿಂದಾಗಿ ರದ್ದಾಗಿದ್ದ ವಿಮಾನಯಾನ ಸೇವೆ ಇಂದಿನಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ.
ಒಂದನೇ ತರಗತಿಗೆ ದಾಖಲಾಗುವ 6 ವರ್ಷ ವಯಸ್ಸಿನ ಮಿತಿಯನ್ನ ಈ ವರ್ಷವೂ ಸಡಿಲ ಮಾಡಬೇಕು ಎಂದು ಮತ್ತೆ ಪೋಷಕರು ಸರ್ಕಾರವನ್ನ ಒತ್ತಾಯಿಸಿದ್ದಾರೆ.
ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ಮುಂದುವರಿದ ಹಿನ್ನೆಲೆ ಇಂದು ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ರದ್ದುಗೊಂಡಿದೆ.
ಇಂದು ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಶ್ರೀ ಡಿ. ಕೆ. ಶಿವಕುಮಾರ್ ಹಾಗೂ ಕರ್ನಾಟಕ ಸರ್ಕಾರದ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೆಗೌಡ ಅವರನ್ನು ಬೆಂಗಳೂರು ಸರ್ಕಾರಿ ನಿವಾಸದಲ್ಲಿ ಭೇಟಿ ಮಾಡಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೋವಿ ಜನಾಂಗದವರಿಗೆ ಜಾತಿ ಪ್ರಮಾಣ ಪತ್ರ ಪಡೆಯಲು ಆಗುವ ಸಮಸ್ಯೆಯ ಬಗ್ಗೆ ಅವರಿಗೆ ವಿಸ್ತಾರವಾಗಿ ಪವನ್ ಕುಮಾರ್ ಶಿರ್ವ ಅವರು ವಿವರಿಸಿದರು.
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ ನಡೆಯಿತು.
ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ನಗರದ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಫ್ಯಾನ್ಸಿ ಸ್ಟೋರ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕರ್ನಾಟಕದ 11 ಜಿಲ್ಲೆಗಳಲ್ಲಿ ದಿಢೀರ್ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಸಿಡಿಲು ಸಹಿತ ಲಘು ಮಳೆಯಾಗಲಿದ್ದು, ಬಿರುಗಾಳಿಯೂ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮ್ಯಾಟ್ರಿಮೋನಿಯಲ್ನಲ್ಲಿ ಪರಿಚಯವಾದ ಯುವತಿಯೊಬ್ಬಳು ಕ್ರಿಪ್ಟೋ ಹೂಡಿಕೆ ನೆಪದಲ್ಲಿ ಯುವಕನಿಗೆ 21.11 ಲಕ್ಷ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿ ಕೆಲವೊಂದು ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ಎಮ್ ಡಿ ಎಮ್ ಎ ಪೂರೈಸುತ್ತಿದ್ದ ಪೆಡ್ಲರ್ ಗಳನ್ನು ಮೈಸೂರಲ್ಲಿ ಬಂಧಿಸಲಾಗಿದೆ.
ರಾಜ್ಯದಲ್ಲಿ ಈ ವರ್ಷ ಬೇಸಿಗೆಯು ನಿರೀಕ್ಷೆಗಿಂತ ಮೊದಲೇ ಆರಂಭವಾಗಿದ್ದು, ಫೆಬ್ರವರಿಯಲ್ಲೇ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಹೀಗಿರುವಾಗ ತಾಪಮಾನ ಇನ್ನಷ್ಟು ಏರಿಕೆಯಾಗುವ ಮತ್ತು ಈ ವರ್ಷ ರಾಜ್ಯದಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ ಇರುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಹೆಸರಘಟ್ಟ ಹೋಬಳಿಯ ಬ್ಯಾತಾ-ಸೀರೇಸಂದ್ರ ಗ್ರಾಮದಲ್ಲಿ ಭಾನುವಾರ ಗ್ರಾಮದಲ್ಲಿ ನಡೆದಿದೆ.