Showing 20 of 1954 posts • Page 19 of 98
ಲೋಕಾಯುಕ್ತರು ದಾಳಿ ನಡೆಸಿದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ಎಂಜಿನಿಯರ್ ಒಬ್ಬರು ₹4.42 ಕೋಟಿ ಮೌಲ್ಯದ ಅಕ್ರಮ ಆಸ್ತಿಯನ್ನು ಹೊಂದಿರುವುದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2025–26ನೇ ಸಾಲಿನ ಪಿ.ಯು.ಸಿ ಪರೀಕ್ಷೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಂತಸದ ಸುದ್ದಿ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಬಿಎಂಟಿಸಿ ಸಾಮಾನ್ಯ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.
: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರದಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ಕಾರಿನ ಬಾನೆಟ್ ಮೇಲೆ ವ್ಯಕ್ತಿಯೊಬ್ಬರು ಇದ್ದಾಗಲೇ ಚಾಲಕ ಅತಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋಗಿರುವ ಘಟನೆ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ. ಮೌಲ್ಯದ ಹೈಡ್ರೋಫೋನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ತನ್ನ ತಂದೆ, ತಾಯಿಯನ್ನು ಪುತ್ರನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ನಡೆದಿದೆ. ನವೀನ್ ಚಂದ್ರ ಭಟ್ (60), ಡಾ.ಶ್ಯಾಮಲಾ ಭಟ್(55) ಕೊಲೆಯಾದವರು.
ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಬೆಂಗಳೂರು ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಈಗಾಗಲೇ ಅಧಿಕಾರಿಗಳ ಸಭೆ ಮಾಡಿದ್ದು, ನೀರಿನ ಸಮಸ್ಯೆ ಆಗುವ ಭಾಗದಲ್ಲಿ ಟ್ಯಾಂಕರ್ ವ್ಯವಸ್ಥೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ.
ಅಕ್ರಮವಾಗಿ ಮಾದಕ ವಸ್ತು ಸಾಗಿಸುತ್ತಿದ್ದ ವ್ಯಕ್ತಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರು ಆಯ್ಕೆಯಾಗಿದ್ದಾರೆ.
ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ಥಣಿಸಂದ್ರ ಬಳಿ ನಡೆದಿದೆ.
ನಟಿ ತಮನ್ನಾ ಭಾಟಿಯಾ ಅವರು ಮೈಸೂರು ಸ್ಯಾಂಡಲ್ ಸೋಪ್ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕಗೊಂಡಿದ್ದಾರೆ. ಆ ಮೂಲಕ ಕೆಎಸ್ಡಿಎಲ್ ವಹಿವಾಟನ್ನು 5,000 ಕೋಟಿ ರೂ.ಗೆ ಹೆಚ್ಚಿಸುವ ಗುರಿ ಹೊಂದಿದೆ.
ಪ್ಲಾಸ್ಟಿಕ್ ಗೋಡೌನ್ಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿಯಲ್ಲಿ ನಡೆದಿದೆ.
ಪ್ರಯಾಣಿಕರೊಬ್ಬರು ಕಳೆದುಕೊಂಡಿದ್ದ ಸುಮಾರು 19 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಇರುವ ಟ್ರಾಲಿ ಬ್ಯಾಗ್ನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಪತ್ತೆಹಚ್ಚಿ ವಾಪಸ್ ನೀಡುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.
ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ‘ಖಾಲಿ ಟ್ರಂಕ್’ ಪ್ರತಿಭಟನೆ ಆಯೋಜಿಸಿದ್ದ ಬೆಂಗಳೂರು ದಕ್ಷಿಣ ಸಂಸದ ಹಾಗೂ ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯರನ್ನು ಪೊಲೀಸರು ಸೋಮವಾರ ವಶಕ್ಕೆ ಪಡೆದರು.
ಬಸ್ನಲ್ಲಿ ಚಿನ್ನಾಭರಣವಿದ್ದ ಬ್ಯಾಗನ್ನು ಬಿಟ್ಟು ಹೋಗಿದ್ದು, ಸುರಕ್ಷಿತವಾಗಿ ಮಾಲೀಕರಿಗೆ ಬಿಎಂಟಿಸಿ ಬಸ್ ಸಿಬ್ಬಂದಿ ಹಿಂದಿರುಗಿಸಿದ್ದು, ಅವರ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಆಕ್ಷೇಪಾರ್ಹ ಪದ ಬಳಕೆ ಆರೋಪದಲ್ಲಿ ಬರಹಗಾರ, ನಟ ಕಿಚ್ಚ ಸುದೀಪ್ ಮ್ಯಾನೇಜರ್ ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನೆರೆ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಹಕ್ಕಿ ಜ್ವರದಿಂದಾಗಿ ಕಾಗೆಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಆತಂಕ ಎದುರಾಗಿದೆ.
ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಗರ್ಭಿಣಿ ಸಾವನ್ನಪ್ಪಿದ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ ನಡೆದಿದೆ.
ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗ ತಡೆಯಲು ಹೊಸ ನಿಯಮ ಜಾರಿಗೆ ಬರುತ್ತಿದೆ.