Showing 20 of 1954 posts • Page 2 of 98
ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಬೇಸಿಗೆಯಂತಹ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಸಂಚರಿಸುವ ಎಲ್ಲ ಯೆಲ್ಲೋ ಬೋರ್ಡ್ ಕ್ಯಾಬ್ಗಳಿಗೆ ಫೇರ್ ಮೀಟರ್ ಅಳವಡಿಸುವುದನ್ನು ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ.
ಸಕ್ಕರೆ ಹಾಗೂ ಬೆಲ್ಲದ ಬೆಲೆಯಲ್ಲಿ ಏರಿಳಿತ ಕಂಡುಬಂದ ಬೆನ್ನಲ್ಲೇ ನಗರದ ಕೆಲವು ಹೋಟೆಲ್ಗಳು ಹಾಗೂ ಟೀ ಸ್ಟಾಲ್ಗಳಲ್ಲಿ ಕಾಫಿ ಮತ್ತು ಟೀ ದರವನ್ನು ಸದ್ದಿಲ್ಲದೆ ₹2ರಿಂದ ₹3ರವರೆಗೆ ಹೆಚ್ಚಿಸಲಾಗಿದೆ.
ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್) ರೈಲು ನಿಲ್ದಾಣದಲ್ಲಿ ಭಾನುವಾರ ತಡರಾತ್ರಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಪ್ಲಾಟ್ಫಾರ್ಮ್ ನಂ. 1 ರಲ್ಲಿ ನಿಲ್ಲಿಸಲಾಗಿದ್ದ ರೈಲಿನ ಖಾಲಿ ಬೋಗಿಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಬೆಂಗಳೂರು: ಕೇಂದ್ರ ಸರ್ಕಾರದ ಏಳನೇ ಕರಡು ಅಧಿಸೂಚನೆ ಆಧಾರಿತ ಡಾ. ಕೆ. ಕಸ್ತೂರಿ ರಂಗನ್ ಸಮಿತಿ ವರದಿ ಮತ್ತು ರಾಜ್ಯದಲ್ಲಿ ಆವರಿಸಿರುವ ಬರ ಪರಿಸ್ಥಿತಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21 ರಿಂದ 23 ರವರೆಗೆ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ಸಚಿವ ಸಂಪುಟ ನಿರ್ಧರಿಸಿದೆ. ಇದರ ಜೊತೆಗೆ, ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಬಗ್ಗೆ ಚರ್ಚಿಸಿ, ಕೇಂದ್ರಕ್ಕೆ ಆರ್ಥಿಕ ನೆರವು ಕೋರಿ ಪ್ರಸ್ತಾವನೆ ಕಳುಹಿಸುವ ಬಗ್ಗೆಯೂ ಚರ್ಚಿಸಲಾಗುವುದು. “ಹಿಂದಿನ ಅಧಿವೇಶನದಲ್ಲಿ ರೈತರು […]
ಕಿರುತೆರೆಯ ಜನಪ್ರಿಯ ನಟಿ ಆಸಿಯಾ ಫಿರ್ದೋಸ್ ತಮ್ಮ ಮನದಾಳದ ಪಾತ್ರ ಶ್ರಾವಣಿಗೆ ಭಾವುಕ ವಿದಾಯ ಹೇಳಿದ್ದಾರೆ. ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ತನ್ನ ಟಿವಿ ಪಯಣವನ್ನು ಮುಗಿಸಿದ ಬೆನ್ನಲ್ಲೇ ನಟಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹೃದಯಸ್ಪರ್ಶಿ ಬರಹವೊಂದನ್ನು ಹಂಚಿಕೊಂಡಿದ್ದಾರೆ.
ರಸ್ತೆ ಕಾಮಗಾರಿ ವೇಳೆ ಗ್ಯಾಸ್ ಪೈಪ್ಗೆ ಹಾನಿಯಾದ ಪರಿಣಾಮ ಅನಿಲ ಸೋರಿಕೆಯಾಗಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ಎಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಜ್ ಯಾತ್ರೆಗೆ ಆಯ್ಕೆಯಾಗಿರುವ ಯಾತ್ರಿಕರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯವು ಮಹತ್ವದ ಸೂಚನೆ ನೀಡಿದೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೊಹಮದ್ ಮುಶಾಮೀರ್, ಅಬ್ದುಲ್ ಶಪ್ಪನ್, ಮೊಹ್ಮದ್ ರಿಜ್ವಾನ್, ನಿಯಾಜ್, ಕಲಂದರ್ ವಿರುದ್ಧ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ತಮ್ಮ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ಕುರಿತು ಮಂಜುನಾಥ್ ಹವೇಲಿ ಅವರು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಪ್ರದೇಶಗಳಿಗೆ ಒಟ್ಟು 2,400 ಹೆಚ್ಚುವರಿ ಬಸ್ಗಳನ್ನು ಕಾರ್ಯಾಚರಣೆಗೆ ತರಲಾಗುತ್ತಿದೆ.
ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಯನ್ನು ತಡೆಗಟ್ಟುವ ಉದ್ದೇಶ ಹೊಂದಿರುವ ‘ಬೇಡಾ ಬ್ರೋ’ ಮತ್ತು ‘ರೈಸ್’ ಅಭಿಯಾನಗಳ ಭಾಗವಾಗಿ ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಇಲ್ಲಿನ ಶಿಕ್ಷಣ ಸಂಸ್ಥೆಗಳ ಸುತ್ತಲೂ ತಪಾಸಣೆ ತೀವ್ರಗೊಳಿಸಿದ್ದಾರೆ.
ಈ ನಿಯಮವು ಭವಿಷ್ಯದಲ್ಲಿ ಬೆಂಗಳೂರಿನ ಬಹುತೇಕ ಉದ್ಯಾನವನಗಳಲ್ಲಿನ ಹಚ್ಚ ಹಸಿರನ್ನೇ ಕಸಿದುಕೊಳ್ಳುವ ಭೀತಿಯಿದೆ ಎಂದು ಇತ್ತೀಚಿನ ದಿನಗಳಲ್ಲಿ ಪರಿಸರವಾದಿಗಳು ಆತಂಕ ವ್ಯಕ್ತಪಡಿಸಿ ಬೀದಿಗಿಳಿದಿದ್ದರು.
ಥೈಲ್ಯಾಂಡ್ನ ಫುಕೆಟ್ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೊಬ್ಬ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ ಒಟ್ಟು 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡಿದ್ದಾರೆ.
ಮಂಗಳೂರಿನಲ್ಲಿ ಸೆಪ್ಟಂಬರ್ 18ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರಕಾರ ತೀರ್ಮಾನಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಬಿ.ನಾಗೇಂದ್ರ ಅವರು ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮ
ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನೊಬ್ಬ ತನ್ನ ಬಾಯಲ್ಲಿ ಅಡಗಿಸಿಕೊಂಡು ತಂದಿದ್ದ ಸುಮಾರು 82 ಗ್ರಾಂ ತೂಕದ ಎರಡು ಚಿನ್ನದ ಕ್ಯಾಪ್ಸೂಲ್ಗಳನ್ನು ಬೆಂಗಳೂರು ಏರ್ಪೋರ್ಟ್ನಲ್ಲಿ CISF ಸಿಬ್ಬಂದಿ ಪತ್ತೆಹಚ್ಚಿದ್ದಾರೆ. ಪ್ರಯಾಣಿಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜ್ಯಾದ್ಯಂತ ಹೋಟೆಲ್ ಹಾಗೂ ಉಪಹಾರ ಗೃಹಗಳಲ್ಲಿ ಬಳಸಲಾಗುವ ಅಡುಗೆ ಎಣ್ಣೆಯ ಕಲಬೆರಕೆಗೆ ಕಡಿವಾಣ ಹಾಕಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾರಿ ಕಾರ್ಯಾಚರಣೆಗೆ ಮುಂದಾಗಿದೆ.
ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ಸಂಸ್ಥೆಯ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದ್ದು, ಕೆಲಕಾಲ ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.