Showing 20 of 1954 posts • Page 20 of 98
ಮದ್ಯ ಸೇವಿಸಿ ಹಾದಿ ಬೀದಿಯಲ್ಲಿ ಇಬ್ಬರು ಯುವತಿಯರು ರಂಪಾಟ ನಡೆಸಿದ ಘಟನೆ ಬನ್ನೇರುಘಟ್ಟ ರಸ್ತೆ ಹುಳಿಮಾವು ಬಳಿ ತಡರಾತ್ರಿ ನಡೆದಿದೆ.
ಪ್ರೀತಿಸಿದ ಯುವತಿ ಕೈ ಕೊಟ್ಟಿದ್ದಕ್ಕೆ ಬಾಡಿ ಬಿಲ್ಡರ್ ಬೆಂಗಳೂರಿನ ಮಹಾಲಕ್ಷ್ಮಿಲೇಔಟ್ ನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು, ವಿಶೇಷವಾಗಿ ಬಾಂಗ್ಲಾದೇಶದವರನ್ನು ಗುರುತಿಸಲು ಪೊಲೀಸ್ ಇಲಾಖೆ ರಾಜ್ಯಾದ್ಯಂತ ಕಾರ್ಯಾಚರಣೆಯನ್ನು ಪ್ರಾರಂಭಿಸಲಿದೆ ಎಂದು ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ್ ಘೋಷಿಸಿದರು.
ವಿಧಾನಸಭೆಯಲ್ಲಿಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ರೊಚ್ಚಿಗೆದ್ದು, ಬಿಜೆಪಿಯರನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ವಿಪಕ್ಷಗಳ ವಿರುದ್ಧ ಅಬ್ಬರಿಸಿದ ಶಿವಲಿಂಗೇಗೌಡ ಬಿಜೆಪಿ ಸದಸ್ಯ ಶರಣು ಸಲಗಾರ್ ಸೇರಿದಂತೆ ಇತರರ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಂಗಳೂರು ಮತ್ತು ಹೊಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಅತ್ತಿಬೆಲೆ ಬಳಿ ಬುಧವಾರ ಭಾರೀ ಪ್ರಮಾಣದಲ್ಲಿ ರಸ್ತೆ ಕುಸಿದಿದ್ದು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಪ್ರಮುಖ ನೀರಿನ ಪೈಪ್ಲೈನ್ಗಳಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ, ಫೆಬ್ರವರಿ 5 ಮತ್ತು 6 ರಂದು 2 ದಿನಗಳ ಕಾಲ ಬೆಂಗಳೂರಿನ ಕೆಲವು ಭಾಗಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ಯೋಜಿತ ವ್ಯತ್ಯಯ ಉಂಟಾಗಲಿದೆ.
ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದ್ದು, ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಅತೈವಾನ್ನ ಎಲೆಕ್ಟ್ರಾನಿಕ್ಸ್ ದೈತ್ಯ ಕಂಪನಿ ಫಾಕ್ಸ್ಕಾನ್ ಮತ್ತು ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಗ್ರಾಮ ಪಂಚಾಯತ್ ನಡುವೆ ದೊಡ್ಡ ಬಿಕ್ಕಟ್ಟು ಭುಗಿಲೆದ್ದಿದ್ದು, ಸ್ಥಳೀಯ ತೆರಿಗೆಗಳನ್ನು ಪಾವತಿಸದಿರುವುದು, ಕಟ್ಟಡ ನಿಯಮ ಉಲ್ಲಂಘನೆ ಮತ್ತು ಹತ್ತಿರದ ಪ್ರದೇಶಗಳ ನಿವಾಸಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವಲ್ಲಿ ವಿಫಲವಾಗಿರುವ ಆರೋಪಗಳ ವಿರುದ್ಧ ಗ್ರಾಮಸ್ಥರು ಸಾಮೂಹಿಕ ಪ್ರತಿಭಟನೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ.
ಪಾಲನಜೋಗಿಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ಹುಡುಗ ಮನೆ ಹತ್ತಿರ ಆಟವಾಡುವ ಸಮಯದಲ್ಲಿ ಬೀದಿ ನಾಯಿ ಕಚ್ಚಿರುವ ಘಟನೆ ನಡೆದಿದೆ.
ಖ್ಯಾತ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಿ ರಾಜ್ಯ ಸರ್ಕಾರ ಇದೀಗ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರದ ಮಾತು ಕೇಳದ ಉದ್ಯಮಿಗಳಿಗೆ ಇಡಿ, ಐಟಿ ಬಳಸಿಕೊಂಡು ಕಿರುಕುಳ ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ
ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕರ್ನಾಟಕ ಪೊಲೀಸ್ ಸಿಬ್ಬಂದಿಯ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ ನೀಡುವಂತೆ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ಥೈಲ್ಯಾಂಡ್ನಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್ಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅಜಿತ್ ಪವಾರ್, ಸಾಮಾಜಿಕ ಬದ್ಧತೆ ಹೊಂದಿದ್ದ ನಾಯಕರಾಗಿದ್ದರು. ಜನರ ಮಧ್ಯೆ ಇರುವ ನಾಯಕನಾಗಿ ಜನಾನುರಾಗಿ ಹೆಸರಾಗಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬಣ್ಣಿಸಿದರು.
ವೃದ್ಧರನ್ನು ಟಾರ್ಗೆಟ್ ಮಾಡಿ ಚೈನ್ ಸ್ಕ್ಯಾಂಚಿಂಗ್ ಮಾಡುತ್ತಿದ್ದ ಗುಂಪನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ 40 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಹಾಡಹಗಲೇ ಮನೆ ಮುಂಬಾಗಿಲಿಗೆ ಅಳವಡಿಸಿದ್ದ ಕಬ್ಬಿಣ ಬಾಗಿಲು ಹಾಗೂ ಲಾಕರ್ ಮೀಟಿ ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ಮಾದನಾಯಕನಹಳ್ಳಿಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹಿಟಾಚಿ ಕಂಪನಿಯ ಸಿಬ್ಬಂದಿಗಳು ಎಟಿಎಂಗೆ ತುಂಬಲು ತೆಗೆದುಕೊಂಡಿದ್ದ ಹಣದೊಂದಿಗೆ ಎಸ್ಕೇಪ್ ಆಗಿದ್ದಾರೆ.
ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಸೋಮವಾರ ಕ್ರಿಕೆಟ್ ಪಂದ್ಯದಲ್ಲಿ ಸೋತ ಮತ್ತು ಗೆದ್ದ ತಂಡಗಳ ನಡುವಿನ ಜಗಳ ಆಟಗಾರನ ದಾರುಣ ಸಾವಿನಲ್ಲಿ ಅಂತ್ಯವಾಗಿದೆ.
77 ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ಯ ಪರೇಡ್ ಮೈದಾನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.